ಡಾ. ಡಿ. ಎನ್. ಶಂಕರ ಬಟ್

ಡಾ. ಡಿ. ಎನ್. ಶಂಕರ ಬಟ್ ಅವರು ಜಗತ್ತಿನ ಹೆಸರಾಂತ ನುಡಿಯರಿಗರು. ಮದ್ರಾಸ್ ವಿಶ್ವವಿದ್ಯಾಲಯದಿಂದ ಸಂಸ್ಕ್ರುತದಲ್ಲಿ ಎಂ.ಎ. ಮತ್ತು ಪುಣೆ ವಿಶ್ವವಿದ್ಯಾಲಯದಿಂದ ನುಡಿಯರಿಮೆ(linguistics)ಯಲ್ಲಿ ಪಿ.ಎಚ್.ಡಿ. ಪಡೆದಿರುವ ಬಟ್ಟರು, ಅಮೇರಿಕಾದ ಸ್ಟ್ಯಾನ್ಪೋರ್‍ಡ್ ಯುನಿವರ್‍ಸಿಟಿ, ಆಸ್ಟ್ರೇಲಿಯಾದ ಲಾ ಟ್ರೋಬೆ ಯುನಿವರ್‍ಸಿಟಿ, ಬೆಲ್ಜಿಯಂ ದೇಶದ ಆಂಟ್ವೆರ್‍ಪ್ ಯುನಿವರ್‍ಸಿಟಿ, ಜರ್‍ಮನಿಯ ಮ್ಯಾಕ್ಸ್ ಪ್ಲಾಂಕ್ ಇನ್ಸ್ಟಿಟ್ಯೂಟ್‍ನಂತಹ ಜಗತ್ತಿನ ಹಲವಾರು ಮುಂಚೂಣಿಯ ವಿಶ್ವವಿದ್ಯಾಲಯಗಳಲ್ಲಿ ಮತ್ತು ಮಯ್ಸೂರಿನಲ್ಲಿರುವ ಬಾರತೀಯ ಬಾಶಾ ಸಂಸ್ತಾನ, ಮಣಿಪುರ ವಿಶ್ವವಿದ್ಯಾಲಯ, ಪುಣೆಯಲ್ಲಿರುವ ಡೆಕ್ಕನ್ ಕಾಲೇಜ್ ಮುಂತಾದೆಡೆ ಕಲಿಸುಗರಾಗಿ, ಅರಕೆಗಾರರಾಗಿ ಕೆಲಸ ಮಾಡಿದ್ದಾರೆ. ನುಡಿಯರಿಮೆಯ ಸುತ್ತ ಬರೆದಿರುವ ಅವರ ಹತ್ತಾರು ಹೊತ್ತಗೆಗಳು ಮತ್ತು ಅರಕೆಯ ಪೇಪರಗಳು (research papers) ಜಗತ್ತಿನೆಲ್ಲೆಡೆ ಹೆಸರುಗಳಿಸಿವೆ.

ಕನ್ನಡ ನುಡಿಯ ಬಗ್ಗೆ ಶಂಕರ ಬಟ್ಟರು ಹಲವು ವರುಶಗಳ ಆಳವಾದ ಅರಕೆ ನಡೆಸಿದ್ದು, ಈ ನಿಟ್ಟಿನಲ್ಲಿ ಪಡೆದುಕೊಂಡ ತಿಳುವಳಿಕೆಗಳನ್ನು ಒಗ್ಗೂಡಿಸಿ ಹಲವು ಹೊತ್ತಗೆಗಳನ್ನು ಬರೆದಿದ್ದಾರೆ. ಕನ್ನಡ ನುಡಿಯು ನಡೆದು ಬಂದ ದಾರಿ, ಕನ್ನಡದಲ್ಲಿರುವ ವ್ಯಾಕರಣದ ನಿಜವಾದ ಕಟ್ಟಲೆಗಳು, ಕನ್ನಡದ ಪದ ಸೊಗಡು ಮುಂತಾದವುಗಳ ಕುರಿತು ಬಟ್ಟರು ಬರೆದಿರುವ ಕನ್ನಡ ನುಡಿಯರಿಮೆಯ ಹೊತ್ತಗೆಗಳು, ಹಿಂದಿನಿಂದ ಕಣ್ಣುಮುಚ್ಚಿ ನಂಬಿಕೊಂಡು ಬಂದಿದ್ದ ಹಲವಾರು ತಪ್ಪು ತಿಳುವಳಿಕೆಗಳನ್ನು ಮತ್ತು ಅವುಗಳನ್ನು ಸರಿಪಡಿಸುವ ಬಗೆಗಳನ್ನು ಕನ್ನಡ ಸಮಾಜಕ್ಕೆ ತೋರಿಸಿಕೊಟ್ಟಿವೆ.

ಮುಂದೆ ಓದಿ >>

ಹೊತ್ತಗೆಗಳು

sollarime-7

vakyagala_olarachane_arthavyavasthe

ಇನ್ನಶ್ಟು>>

 

ವಿಡಿಯೋಗಳು

 

 

 

 

 

ಇನ್ನಶ್ಟು>>

 

facebooktwitter