ಸಂಸ್ಕೃತ ಪದಗಳಿಗೆ ಕನ್ನಡದ್ದೇ ಪದಗಳು

samskrutha_padagalige_kannadadde_padagalu

ಬರಹಗಾರರು: ಡಾ. ಡಿ. ಎನ್. ಶಂಕರ ಬಟ್
ಪುಟಗಳು: 283
ಅಚ್ಚು: ಮೊದಲನೇ ಅಚ್ಚು, 2017
ಹೊರಪಡಿಕೆ: ಡಾ. ಡಿ. ಎನ್. ಶಂಕರ ಬಟ್

ಕೊಂಡುಕೊಳ್ಳಿರಿ
munnota  
totalkannada
navakarnataka


 ವಿವರಗಳು

ಕನ್ನಡ ಬರಹಗಳಲ್ಲಿ ಬಳಕೆಯಾಗುವ ಪದಗಳಲ್ಲಿ ಕನ್ನಡದವು ಯಾವುವು ಮತ್ತು ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳು ಯಾವುವು ಎಂಬುದನ್ನು ತಿಳಿಯಬೇಕೆಂದಿರುವವರಿಗೆ ನೆರವಾಗಲು ಈ ಪದನೆರಕೆಯನ್ನು ಉಂಟುಮಾಡಲಾಗಿದೆ.

ಇದಲ್ಲದೆ, ಕನ್ನಡ ಬರಹಗಳು ಎಲ್ಲಾ ಕನ್ನಡಿಗರನ್ನೂ ತಲುಪುವಂತೆ ಮಾಡಲು ಅವುಗಳಲ್ಲಿ ಆದಶ್ಟು ಕಡಿಮೆ ಸಂಸ್ಕ್ರುತ ಎರವಲುಗಳನ್ನು ಬಳಸಬೇಕು ಮತ್ತು ಹೆಚ್ಚು ಹೆಚ್ಚು ಕನ್ನಡದವೇ ಆದ ಪದಗಳನ್ನು ಬಳಸಬೇಕು ಎಂಬ ತುಡಿತ ಇರುವವರಿಗೆ ಸಂಸ್ಕ್ರುತ ಎರವಲುಗಳಿಗೆ ಸಾಟಿಯಾಗಿ ಎಂತಹ ಕನ್ನಡ ಪದಗಳನ್ನು ಬಳಸಲು ಬರುತ್ತದೆ ಎಂಬುದನ್ನು ತಿಳಿಸುವುದಕ್ಕಾಗಿಯೂ ಈ ಪದನೆರಕೆಯನ್ನು ಉಂಟುಮಾಡಲಾಗಿದೆ.

ಸಂಸ್ಕ್ರುತ ಎರವಲುಗಳಿಗೆ ಬದಲಾಗಿ ಕನ್ನಡದವೇ ಆದ ಪದಗಳನ್ನು ಕಟ್ಟಬೇಕೆಂದಿರುವವರಿಗೂ ಈ ಪದನೆರಕೆಯಲ್ಲಿ ಬಳಸಲಾಗಿರುವ ಹಲವು ಹೊಸ ಪದಕಟ್ಟಣೆಗಳು ನೆರವು ನೀಡಬಲ್ಲುವು.

facebooktwitter